February 2012 M T W T F S S « Sep 1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 Recent Comments
-
Recent Posts
Tags
ಪ್ರಜಾವಾಣಿ- ಎಂಜಿನಿಯರಿಂಗ್ ಸಿಇಟಿ: 2013ಕ್ಕೆ ಅನುಮಾನದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ಏಕರೂಪದ ಎಂಜಿನಿಯರಿಂಗ್ `ಸಾಮಾನ್ಯ ಪ್ರವೇಶ ಪರೀಕ್ಷೆ~ (ಸಿಇಟಿ) ಮುಂದಿನ ಶೈಕ್ಷಣಿಕ ವರ್ಷದಿಂದ (2013) ಜಾರಿಗೆ ಬರುವ ಕುರಿತು ಅನಿಶ್ಚತತೆ ತಲೆದೋರಿದೆ. […]
- ಬ್ಲೂ ಫಿಲಂ: ಚಾನೆಲ್ಗಳ ವಿರುದ್ಧ ಪಿಐಎಲ್ವಿಧಾನಸಭೆಯಲ್ಲಿ ಶಾಸಕರಾದ ಲಕ್ಷ್ಮಣ ಸವದಿ ಮತ್ತು ಸಿ.ಸಿ.ಪಾಟೀಲ ವೀಕ್ಷಿಸಿದ ಅಶ್ಲೀಲ ಚಿತ್ರಗಳ ತುಣುಕುಗಳನ್ನು ಪ್ರಸಾರ ಮಾಡಿರುವ ಟಿವಿ ಚಾನೆಲ್ಗಳ ವಿರುದ್ಧ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. […]
- ಕಾರ್ಖಾನೆಗೆ ಬೆಂಕಿ: 18 ಕೋಟಿ ಹಾನಿಇಲ್ಲಿಯ ಛಾಯಾ ಜಿನ್ನಿಂಗ್ ಕಾರ್ಖಾನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಕೋಟ್ಯಂತರ ರೂಪಾಯಿ ಮೌಲ್ಯದ ಹತ್ತಿ, ಕಾಳು, ಯಂತ್ರೋಪಕರಣಗಳು ಸುಟ್ಟು ಭಸ್ಮವಾದ ಘಟನೆ ಬುಧವಾರ ನಡೆದಿದೆ. […]
- ಎಂಜಿನಿಯರಿಂಗ್ ಸಿಇಟಿ: 2013ಕ್ಕೆ ಅನುಮಾನ
Author Archives: Ismail
ಆ ಅಪ್ಪ ನಾನು ಸತ್ತಿದ್ದಾನೆ ಅಂದುಕೊಂಡಿದ್ದ ಅಪ್ಪನಂತಿರಲಿಲ್ಲ!
ಯೋಸಾ ತನ್ನ ತಾಯಿಯೊಂದಿಗೆ ಮಾರಿಯಾ ವರ್ಗಾಸ್ ಲೋಸಾನ ಹೆಸರನ್ನು ಯೋಸಾ ಎಂದು ಬರೆಯಬೇಕಂತೆ. ಇದನ್ನು ಬರೆಯುವ ಹೊತ್ತಿಗೆ ನನಗೆ ಅದು ಅರ್ಧಂಬರ್ಧ ಗೊತ್ತಿತ್ತು. ಯೋಸಾ ಎಂದು ಬರೆಯಲು ಧೈರ್ಯ ಸಾಲದೆ ಲೋಸಾ ಎಂದೇ ಬರೆದೆ. ಇದು ಅವನ ಆತ್ಮಕಥೆಯಾದ ಫಿಶ್ ಇನ್ ದ ವಾಟರ್ ನಿಂದ ಆಯ್ದ ಭಾಗಗಳ ಸಂಗ್ರಹ. ತನ್ನ ಅಪ್ಪನನ್ನು ಭೇಟಿಯಾಗಲು ಹೋಗುವ … Continue reading
ಒಂದೂವರೆ ವರ್ಷಗಳ ನಂತರ ಮತ್ತೆ…
ಹತ್ತಿರ ಹತ್ತಿರ ಒಂದೂವರೆ ವರ್ಷಗಳ ನಂತರ ಮತ್ತೊಂದು ಬ್ಲಾಗ್ ಪೋಸ್ಟ್ ಬರೆಯುತ್ತಿದ್ದೇನೆ. ಯಾಕೆ ಇಷ್ಟು ಕಾಲ ಬರೆಯಲಿಲ್ಲ ಎಂದು ಯಾರಾದರೂ ಕೇಳಿದರೆ ಹಲವು ಉತ್ತರ ಹೇಳಬಹುದು. ಅವೆಲ್ಲವೂ ನನ್ನ ಸೋಮಾರಿತನಕ್ಕೆ ಮಾಡುವ ಸಮರ್ಥನೆಗಳಾಗಿಬಿಡುತ್ತವಲ್ಲಾ ಎಂಬ ಭಯ ನನ್ನದು. ಹಾಗಾಗಿ ಯಾವ ಕಾರಣಗಳನ್ನೂ ಹೇಳುವುದಿಲ್ಲ. ಇನ್ನು ಮುಂದೆ ನಿಯತವಾಗಿ ಬ್ಲಾಗ್ ಬರೆಯಬೇಕೆಂಬ ತೀರ್ಮಾನವನ್ನಂತೂ ಮಾಡಿದ್ದೇನೆ.
ಉನ್ನತ ಶಿಕ್ಷಣ: ಸುಧಾರಣೆಗೆ ಮಂತ್ರದಂಡವಿಲ್ಲ
ಉನ್ನತ ಶಿಕ್ಷಣವೆಂದರೆ ಜ್ಞಾನದ ಸೃಷ್ಟಿಗೆ ಬೇಕಾದ ತರಬೇತಿಯೇ, ಕೌಶಲ್ಯ ವೃದ್ಧಿಯೇ? ಈ ಪ್ರಶ್ನೆಗೆ ಭಾರತೀಯ ಸಂದರ್ಭದಲ್ಲಿ ಒಂದು ಸ್ಪಷ್ಟ ಉತ್ತರವಿಲ್ಲ. ಉನ್ನತ ಶಿಕ್ಷಣದ ವ್ಯಾಪ್ತಿಯಲ್ಲಿ ಬರುವ ತಾಂತ್ರಿಕ, ವೈದ್ಯಕೀಯ ಮತ್ತು ಮ್ಯಾನೇಜ್‌ಮೆಂಟ್ ಕೋರ್ಸ್‌ಗಳು ಕೌಶಲ್ಯ ವೃದ್ಧಿಯನ್ನು ಮಾತ್ರ ದೃಷ್ಟಿಯಲ್ಲಿಟ್ಟುಕೊಂಡಿವೆ. Continue reading
ಭಿನ್ನಮತದ ದ್ರವೀಕರಣ ಸಾಧ್ಯತೆಯು
ಯಡಿಯೂರಪ್ಪನವರದ್ದು ಹಲ ಬಗೆಯ ಸಾಧನೆ. ದಕ್ಷಿಣ ಭಾರತದ ಮೊಟ್ಟ ಮೊದಲ ಬಿಜೆಪಿ ಸರ್ಕಾರ ಅಧಿಕಾರಕ್ಕೇರುವಂಥ ನಾಯಕತ್ವ ನೀಡಿದ್ದು ಅವರ ಮೊದಲ ಸಾಧನೆ. ವಿವಿಧ ಪಕ್ಷಗಳ ಶಾಸಕರ ರಾಜೀನಾಮೆ ಕೊಡಿಸಿ ಪಕ್ಷಕ್ಕೆಳೆದುಕೊಂಡು ಬಂದು ಉಪ ಚುನಾವಣೆಗೆ ಕಾರಣರಾಗಿ ಆ ಸ್ಥಾನಗಳಲ್ಲಿ ಹೆಚ್ಚಿನವನ್ನು ಗೆದ್ದುಕೊಂಡದ್ದೂ ಯಡಿಯೂರಪ್ಪ ನವರ ಸಾಧನೆಯೇ. ಲೋಕಸಭಾ ಚುನಾವಣೆಗಳಲ್ಲಿ ಬಿಜೆಪಿಗೆ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಟ್ಟದ್ದೂ ಅವರ ಮತ್ತೊಂದು ಸಾಧನೆ. ಈ ಪಟ್ಟಿಗೆ ಹೊಸ ಸೇರ್ಪಡೆ ಸರ್ಕಾರ ಒಂದು ವರ್ಷ ಪೂರೈಸಿದ ಹೊತ್ತಿನಲ್ಲೇ ಭಿನ್ನಮತದ ಉದ್ಘಾಟನೆ. ಭಿನ್ನಮತವೆಂಬುದು ಎಲ್ಲಾ ಸರ್ಕಾರಗಳಲ್ಲೂ ಇತ್ತು. ಆದರೆ ಇದು ಆರಂಭವಾಗುವುದಕ್ಕೆ ಕನಿಷ್ಠ ಎರಡು ವರ್ಷಗಳ ಅವಧಿಯಾದರೂ ಬೇಕಿತ್ತು. ಯಡಿಯೂರಪ್ಪನವರ ಸರ್ಕಾರ ಈ ವಿಷಯದಲ್ಲೂ ಮುಂದಿದೆ!
ಉಗ್ರ ಹೇಳಿಕೆಗಳಿಗೆ ಖ್ಯಾತರಾಗಿದ್ದ ಇಂಧನ ಸಚಿವ ಕೆ.ಎಸ್. ಈಶ್ವರಪ್ಪನವರು ಜೂನ್ ಒಂದನೇ ತಾರೀಕಿನಂದು ಶಿವಮೊಗ್ಗದಲ್ಲಿ `ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಲು ಹಣ, ಹೆಂಡ, ಜಾತಿಯ ಬಳಕೆ ಆಗಿದ್ದು ಇದರ ಬಗ್ಗೆ ಹಿರಿಯ ಮುಖಂಡರಿಂದ ತನಿಖೆ ನಡೆಸ ಬೇಕು’ ಎಂದು ಗುಡುಗಿದ್ದರು. ಅವರು ತಮ್ಮ ಹೇಳಿಕೆಯನ್ನು ಕೇವಲ `ತನಿಖೆ’ಗೆ ಮಾತ್ರ ಸೀಮಿತಗೊಳಿಸದೆ `ಹತ್ತೊಂಬತ್ತು ಕ್ಷೇತ್ರಗಳಲ್ಲಿ ಪಕ್ಷ ಗೆದ್ದಿರಬಹುದು. ಆದರೆ ಈ ಗೆಲುವು ಯಾವರೂಪದಲ್ಲಿ ಲಭಿಸಿದೆ’ ಎಂಬ ನೈತಿಕ ಪ್ರಶ್ನೆಯನ್ನೂ ಎತ್ತಿದ್ದರು. ಈಶ್ವರಪ್ಪನವರು ರಾಜ್ಯ ಬಿಜೆಪಿಯ ಸಣ್ಣ ನಾಯಕರೇನೂ ಅಲ್ಲ. ಲೋಕಸಭಾ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು, ಯಾರಿಗೆ ಟಿಕೆಟ್ ನೀಡಬಾರದು ಎಂಬುದನ್ನು ನಿರ್ಧರಿಸುವ ಸಮಿತಿ ಯಲ್ಲೂ ಇದ್ದವರು. ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಕಟ್ಟಿದವರು. ಅವರ ಹೇಳಿಕೆಗೆ ಮುಖ್ಯಮಂತ್ರಿಗಳು ತಣ್ಣಗಿನ ಪ್ರತಿಕ್ರಿಯೆ ನೀಡಿದರಾದರೂ ಆಡಳಿತಾರೂಢ ಬಿಜೆಪಿಯೊಳಗೊಂದು ಅಗ್ನಿ ಪರ್ವತವಿರುವುದಂತೂ ಜನರಿಗೆ ತಿಳಿಯಿತು.
Continue reading
Posted in ಒಂಟಿದನಿ (ಉದಯವಾಣಿ ಅಂಕಣ)
2 Comments
ಉತ್ತಮ ಆಡಳಿತವೆಂಬ ಚುನಾವಣಾ ವಿಷಯ
ಭಾರತದ ಚುನಾವಣಾ ಇತಿಹಾಸದಲ್ಲಿ ಎರಡು ಪ್ರಮುಖ ಘೋಷಣೆ ಗಳಿವೆ. ಒಂದು ಇಂದಿರಾ ಗಾಂಧಿಯವರ ಕಾಲದ `ಗರೀಬಿ ಹಟಾವೋ’ ಮತ್ತೊಂದು ವಾಜಪೇಯಿ ಆಡಳಿತಾವಧಿಯನ್ನು ಗಮನದಲ್ಲಿಟ್ಟು ಕೊಂಡು ರೂಪಿಸಿದ `ಭಾರತ ಪ್ರಕಾಶಿಸುತ್ತಿದೆ’. ಈ ಎರಡೂ ಘೋಷಣೆ ಗಳ ಮಧ್ಯೆ ಮೂರು ದಶಕಗಳ ಅಂತರವಿದೆ. ಗರೀಬಿ ಹಟಾವೋ ಒಂದು ಕಾಲಘಟ್ಟದ ಭಾರತದ ಮನೋಭೂಮಿಕೆಯನ್ನು ಹೇಗೆ ವಶಪಡಿಸಿ ಕೊಂಡಿತೆಂದರೆ ಅವನತಿಯಂಚಿನಲ್ಲಿದ್ದ ಕಾಂಗ್ರೆಸ್‌ಗೆ ಮರುಜೀವ ದೊರೆಯಿತು. ಇಡೀ ಭಾರತದ ಮನೋಭೂಮಿಕೆಯನ್ನು ಹಿಡಿದಿಡುವ ಇಂಥದ್ದೊಂದು ಘೋಷಣೆಯನ್ನು ನೀಡುವುದಕ್ಕೆ ಈ ತನಕ ಯಾರಿಗೂ ಸಾಧ್ಯವಾಗಲಿಲ್ಲ.
ವಾಜಪೇಯಿ ನೇತೃತ್ವದ ಎನ್‌ಡಿಎ ಸರಕಾರದ ಅವಧಿ ಪೂರ್ಣ ಗೊಂಡಾಗ ಬಿಜೆಪಿ ತನ್ನ ರಾಜಕಾರಣದ ಪುನರಾ ವಿಷ್ಕರಣಕ್ಕೆ ಹೊರಟಿತು. ತನ್ನ ಆಡಳಿತದ ಐದು ವರ್ಷಗಳಲ್ಲಿ ಕಾಣಿಸಿದ ಆರ್ಥಿಕತೆಯ ಉತ್ಕರ್ಷ ವನ್ನು ಗಮನದಲ್ಲಿಟ್ಟುಕೊಂಡು ಅದು `ಭಾರತ ಪ್ರಕಾಶಿಸುತ್ತಿದೆ’ ಎಂಬ ಘೋಷಣೆಯೊಂದಿಗೆ ಚುನಾವಣೆಯನ್ನು ಎದುರಿಸಿತು. ಇದಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಮೂರು ದಶಕಗಳಿಗೂ ಹೆಚ್ಚು ಹಳತಾದ `ಗರೀಬಿ ಹಟಾವೋ’ದ ಪರಿಕಲ್ಪನೆಯನ್ನೇ ಸ್ವಲ್ಪ ಸುಧಾರಿಸಿ `ಆಮ್ ಆದ್ಮಿ’ಯ ಬಗ್ಗೆ ಮಾತನಾಡಿತು. ಎರಡೂ ಘೋಷಣೆಗಳು ಭಾರತದ ಮನೋ ಭೂಮಿಕೆಯನ್ನು ಹಿಡಿದಿಡಲಿಲ್ಲ ಎಂಬುದನ್ನು ಚುನಾವಣಾ ಫಲಿತಾಂಶವೇ ಹೇಳಿತು. ಬಿಜೆಪಿ ನೇತೃತ್ವದ ಎನ್‌ಡಿಎ ಸೋತಿತು. ಕಾಂಗ್ರೆಸ್ ಏಕಾಂಗಿಯಾಗಿ ಅಧಿಕಾರಕ್ಕೇರಲಾಗದೆ ಮತ್ತೊಂದು ಮೈತ್ರಿಕೂಟ ರೂಪಿಸಿ ಸರಕಾರ ರಚಿಸಿತು. Continue reading
Posted in ಒಂಟಿದನಿ (ಉದಯವಾಣಿ ಅಂಕಣ)
2 Comments
